ADVERTISEMENT

ಮುಂಗಾರು ಬೆಳೆ ಸಮೀಕ್ಷೆ ಮಾದರಿಯಲ್ಲಿ ಹಿಂಗಾರು ಬೆಳೆ ಸಮೀಕ್ಷೆ: ಬಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 10:57 IST
Last Updated 7 ನವೆಂಬರ್ 2020, 10:57 IST
ಬಿ.ಸಿ. ಪಾಟೀಲ
ಬಿ.ಸಿ. ಪಾಟೀಲ   

ಬೆಂಗಳೂರು: ಮುಂಗಾರು ಬೆಳೆ ಸಮೀಕ್ಷೆ ಶೇ 100ರಷ್ಟು ಯಶಸ್ವಿಯಾಗಿದ್ದು, ಅದೇ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆ ನಡೆಸಲು ಕೃಷಿ ಇಲಾಖೆ ನಿರ್ಧರಿಸಿದೆ.

ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕುರಿತಂತೆ ಇಲಾಖೆಯ ಅಧಿಕಾರಿಗಳ ಜೊತೆ ಕೃಷಿ ಸಚಿವ ಬಿ.ಸಿ. ಪಾಟೀಲ ಶನಿವಾರ ಸಭೆ ನಡೆಸಿದರು.

ಡಿಸೆಂಬರ್ ಮೊದಲ ವಾರದಲ್ಲಿ ಹಿಂಗಾರು ಬೆಳೆ ಸಮೀಕ್ಷೆಯ ಆ್ಯಪ್ ಬಿಡುಗಡೆ ಆಗಲಿದೆ. ಮುಂಗಾರು ಅವಧಿಯಲ್ಲಿ ರೈತರು ತಮ್ಮ ಬೆಳೆ ಜಮೀನಿನ ಸಮೀಕ್ಷೆಯನ್ನು ತಾವೇ ಆ್ಯಪ್ ಮೂಲಕ ನಡೆಸಿದ್ದಾರೆ. ಅದೇ ಮಾದರಿಯಲ್ಲಿಯೇ ಹಿಂಗಾರು ಬೆಳೆ ಸಮೀಕ್ಷೆಯನ್ನು ಕೂಡ ಯಶಸ್ವಿಯಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ADVERTISEMENT

ಹಿಂಗಾರು ಬೆಳೆ ಸಮೀಕ್ಷೆ ಕುರಿತು ಮಾಸ್ಟರ್ಸ್‌ಗಳಿಗೆ ತರಬೇತಿ ನೀಡುವುದು, ಮಾಸ್ಟರ್ಸ್ ತರಬೇತುದಾರರಿಂದ ಸ್ಥಳೀಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ (ಪಿಆರ್‌ಒ) ಬೆಳೆ ಸಮೀಕ್ಷೆ ಆ್ಯಪ್ ಬಗ್ಗೆ ತರಬೇತಿ ನೀಡಿ ಬಳಿಕ ರೈತರೇ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ ನಡೆಸಲು ಕ್ರಮಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.