ADVERTISEMENT

ಚಿಟಿಕೆ ಸುದ್ದಿ: ಕೆಎಂಎಫ್‌ ಅಧ್ಯಕ್ಷ ಸ್ಥಾನದ ಮೇಲೆ ಹಿಟ್ನಾಳ ಕಣ್ಣು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 0:06 IST
Last Updated 14 ಫೆಬ್ರುವರಿ 2026, 0:06 IST
<div class="paragraphs"><p>ರಾಘವೇಂದ್ರ ಹಿಟ್ನಾಳ</p></div>

ರಾಘವೇಂದ್ರ ಹಿಟ್ನಾಳ

   

ಕೆಎಂಎಫ್‌ ಅಧ್ಯಕ್ಷ ಸ್ಥಾನದ ಮೇಲೆ ಹಿಟ್ನಾಳ ಕಣ್ಣು

ಕೊಪ್ಪಳ: ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ (ರಾಬಕೊವಿ) ಹಾಲು ಒಕ್ಕೂಟದ ಅಧ್ಯಕ್ಷ, ಕೊಪ್ಪಳ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್‌) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇದಕ್ಕಾಗಿ ತೆರೆಮರೆಯಲ್ಲಿ ಕಸರತ್ತು ನಡೆಸಿದ್ದಾರೆ.

ADVERTISEMENT

ಶುಕ್ರವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೆಎಂಎಫ್‌ ಅಧ್ಯಕ್ಷನಾಗುವ ಆಸೆಯಿದೆ. ಪಕ್ಷದ ನಾಯಕರು ಹಾಗೂ ನಿರ್ದೇಶಕರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವೆ. ಅಂತಿಮವಾಗಿ ಹೈಕಮಾಂಡ್‌ ಹೇಳಿದಂತೆ ಮಾಡುತ್ತೇನೆ. ನಾವೆಲ್ಲರೂ ಒಂದೇ ಇದ್ದು ಬಣ ರಾಜಕಾರಣ ಇಲ್ಲ’ ಎಂದರು.

****

ಕರಾವಳಿಯಲ್ಲಿ ಇನ್ನೆರಡು ದಿನ ಶಾಖ ಅಲೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಫೆ.14 ಮತ್ತು 15ರಂದು ಶಾಖದ ಅಲೆಯ ವಾತಾವರಣ ಇರಲಿದ್ದು, ಆರ್ದೃತೆ ಅಧಿಕವಾಗಿರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

‘ಮೂರು–ನಾಲ್ಕು ದಿನಗಳಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಸೆಕೆ ಇದೆ. ಬೇಸಿಗೆ ಆರಂಭದಲ್ಲೇ ಸೆಕೆ ಹೆಚ್ಚಳದ ಮುನ್ಸೂಚನೆ ನೀಡಿದೆ. ‘ಶಾಖ ಅಲೆ ಕಾರಣ ಎರಡು ದಿನ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮಧ್ಯಾಹ್ನ 12 ರಿಂದ ಸಂಜೆ 4ರವರೆಗೆ ಮನೆಯಿಂದ ಹೊರಗೆ ಓಡಾಡುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸಲಹೆ ಮಾಡಿದ್ದಾರೆ. 

ಫೆ.12ರಂದು ಕಾರವಾರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ದೇಶದಲ್ಲಿ ಅತಿ ಹೆಚ್ಚು ಉಷ್ಣಾಂಶವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.