ADVERTISEMENT

ರಾಘವೇಶ್ವರ ಶ್ರೀ ಅತ್ಯಾಚಾರ ಆರೋಪ ಮುಕ್ತ ಅರ್ಜಿ ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2018, 11:55 IST
Last Updated 14 ಆಗಸ್ಟ್ 2018, 11:55 IST
   

ಬೆಂಗಳೂರು:ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿರುವ ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ 17ಕ್ಕೆ ಮುಂದೂಡಿದೆ.

ಈ ಕುರಿತಂತೆ ಸಂತ್ರಸ್ತೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಸ್ವಾಮೀಜಿ ಪರ ವಕೀಲ ಪಿ.ಎನ್.ಮನಮೋಹನ್, ಸ್ವಾಮಿ, ನಾವು ವಾದ ಮಂಡನೆಗೆ ಹಿರಿಯ ವಕೀಲರವಿ‌.ಬಿ.ನಾಯಕ್ ಅವರನ್ನು ನೇಮಕ ಮಾಡಿಕೊಳ್ಳುತ್ತಿದ್ದೇವೆ. ಹೀಗಾಗಿ ಸಮಯಾವಕಾಶ ನೀಡಬೇಕು ಎಂದು ಕೋರಿದರು.

ADVERTISEMENT

ಸಂತ್ರಸ್ತೆಯ ಪರ ಹಾಜರಿದ್ದ ಹಿರಿಯ ವಕೀಲ ಎಂ.ಟಿ.ನಾಣಯ್ಯ, "ಹೆಚ್ಚು ಸಮಯ ನೀಡಬಾರದು" ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 17ಕ್ಕೆ ಮುಂದೂಡಿದೆ.

ಪ್ರಕರಣವೇನು?:
‘ಸ್ವಾಮೀಜಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಸೂಕ್ತ ಸಾಕ್ಷಾಧಾರಗಳಿವೆ. ಪ್ರಕರಣದಲ್ಲಿ ಪೊಲೀಸರು ಸಾಮೀಜಿ ವಿರುದ್ಧ ಸಿಐಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆದರೂ, ಅವರು ಅತ್ಯಾಚಾರ ನಡೆಸಿದ ಬಗ್ಗೆ ಸಾಕ್ಷಾಧಾರಗಳಿಲ್ಲ ಎಂದು ಸೆಷನ್ಸ್ ನ್ಯಾಯಾಧೀಶ ಜಿ.ಬಿ.ಮುದಿಗೌಡರ್‌ ಅಭಿಪ್ರಾಯಪಟ್ಟಿದ್ದಾರೆ. ಇದು ತಪ್ಪು’ ಎಂಬುದು ಅರ್ಜಿದಾರರ ವಾದ.

‘ಸ್ವಾಮೀಜಿ ಅವರನ್ನು ಆರೋಪದಿಂದ ಮುಕ್ತಗೊಳಿಸಿ ಮುದಿಗೌಡರ್ 2016ರ ಮಾರ್ಚ್ 31ರಂದು ಹೊರಡಿಸಿದ ಆದೇಶ ರದ್ದುಗೊಳಿಸಬೇಕು’ ಎಂದು ಕೋರಿ ಸಂತ್ರಸ್ತೆ ಈ ಮೇಲ್ಮನವಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.