ಬೆಂಗಳೂರು: ಈ ಸಾಲಿನ ‘ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರಶಸ್ತಿಗೆ’ ಸುಧಾ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ., ಕವಯತ್ರಿ ರೂಪ ಹಾಸನ ಅವರು ಆಯ್ಕೆಯಾಗಿದ್ದಾರೆ.
ಈ ಸಂಬಂಧ ಪ್ರಕಟಣೆ ನೀಡಿರುವ ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರತಿಷ್ಠಾನವು, ‘ಲಲಿತ ಪ್ರಬಂಧ ಮತ್ತು ಗದ್ಯ ಸಾಹಿತ್ಯದಲ್ಲಿನ ಕಾರ್ಯವನ್ನು ಗುರುತಿಸಿ ರಘುನಾಥ ಅವರನ್ನು ಮತ್ತು ಕಾವ್ಯಕ್ಷೇತ್ರ ಹಾಗೂ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ರೂಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದೆ.
‘ಇದೇ 21ರಂದು ತುಮಕೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ₹10,000 ನಗದು, ಫಲಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ’ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.