ಹಿರಿಯೂರು: ಕೆಲವು ದಿನಗಳ ಹಿಂದೆ ಭಾರತ್ ಜೋಡೊ ಯಾತ್ರೆಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕೈ ಹಿಡಿದು ರಾಹುಲ್ ಗಾಂಧಿ ಓಡಿದ್ದರು. ಇದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು.
ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗೂ ಓಡುವ ಮೂಲಕ ರಾಹುಲ್ ಮತ್ತೆ ಗಮನ ಸೆಳೆದಿದ್ದಾರೆ. ಈ ಮೂಲಕ ಇಬ್ಬರು ನಾಯಕರನ್ನು ಸಮಾನವಾಗಿ ಗುರುತಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ತುಮಕೂರಿನಿಂದ ಹಿರಿಯೂರಿಗೆ ಕಾಲ್ನಡಿಗೆಯ ಯಾತ್ರೆ ವೇಳೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಡಿ.ಕೆ. ಶಿವಕುಮಾರ್ ಸಾಥ್ ನೀಡಿದರು.
ಈ ವೇಳೆ ಡಿ.ಕೆ. ಶಿವಕುಮಾರ್ ಅವರನ್ನು ಓಡುವಂತೆ ರಾಹುಲ್ ಗಾಂಧಿ ಪ್ರೇರಿಪಿಸಿದರು. ಕಾಂಗ್ರೆಸ್ ಧ್ವಜ ಹಿಡಿದು ಸ್ವಲ್ಪ ದೂರದವರೆಗೆ ಡಿ.ಕೆ. ಶಿವಕುಮಾರ್, ರಾಹುಲ್ ಜೊತೆಗೆ ಓಡಿದರು.
ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎಂದು ವರದಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.