ADVERTISEMENT

ರಾಹುಲ್ ಗಾಂಧಿ ಜನ್ಮದಿನ: ಕೆಪಿಸಿಸಿಯಿಂದ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2020, 7:37 IST
Last Updated 19 ಜೂನ್ 2020, 7:37 IST
ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಿಸಿದರು.
ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಿಸಿದರು.   
""

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ರಾಜ್ಯ ಮತ್ತು ಮಜ್ದೂರ್ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಸಚಿನ್ ಮಿಗಾ ಮತ್ತಿತರರು ಭಾಗವಹಿಸಿದ್ದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಂದು 50ನೇ ವಸಂತಕ್ಕೆ ಕಾಲಿಟ್ಟಿದ್ದು, ರಾಜಕೀಯ ಗಣ್ಯರು ಸೇರಿದಂತೆ ಹಲವು ಪ್ರಮುಖರು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ.

ADVERTISEMENT

ಆದರೆ ದೇಶದಲ್ಲಿ ಕೊರೊನಾ ಅಟ್ಟಹಾಸ ಹಾಗೂ ಲಡಾಖ್‌ ಗಡಿಯಲ್ಲಿ ದೇಶದ 20 ಯೋಧರು ಹುತಾತ್ಮರಾದ ಹಿನ್ನೆಲೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ರಾಹುಲ್‌ ನಿರ್ಧರಿಸಿದ್ದಾರೆ. ಈ ಕುರಿತು ಎಲ್ಲಾ ರಾಜ್ಯ ಘಟಕಗಳಿಗೆ ಮಾಹಿತಿ ನೀಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ, ಬಡವರಿಗೆ ಆಹಾರ ಕಿಟ್‌ಗಳನ್ನು ವಿತರಿಸಿ. ಆದರೆ, ಸಂಭ್ರಮಾಚರಣೆ ಬೇಡ ಎಂದು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.