ಕುಷ್ಟಗಿ (ಕೊಪ್ಪಳ ಜಿಲ್ಲೆ): ಜಿಲ್ಲೆಯ ಕುಷ್ಟಗಿ ಪಟ್ಟಣದ ಸಿಂಧನೂರು ರಸ್ತೆಯ ಪಕ್ಕದಲ್ಲಿರುವ ಮೈದಾನದಲ್ಲಿ ಶುಕ್ರವಾರ ಮಧ್ಯಾಹ್ನ 3.30ಕ್ಕೆ ಕಾಂಗ್ರೆಸ್ ಪ್ರಚಾರ ಸಮಾವೇಶ ನಿಗದಿಯಾಗಿದ್ದು, ಸಿದ್ದತೆ ಪೂರ್ಣಗೊಂಡಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ವೇದಿಕೆ ಕಾರ್ಯಕ್ರಮದ ಬಳಿಕ ರಾಹುಲ್ ಗಾಂಧಿ ಮಹಿಳಾ ಮತದಾರರ ಜೊತೆ ಸಂವಾದ ನಡೆಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಸಿಪಿಐ ಸಿಂಗಪ್ಪ ಭದ್ರತಾ ಕಾರ್ಯ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.