ADVERTISEMENT

ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್‌ಗೆ ಅಭಿನಂದನೆಗಳು: ಆರ್‌. ಅಶೋಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ನವೆಂಬರ್ 2025, 7:05 IST
Last Updated 14 ನವೆಂಬರ್ 2025, 7:05 IST
<div class="paragraphs"><p> ಆರ್‌. ಅಶೋಕ</p></div>

ಆರ್‌. ಅಶೋಕ

   

ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, 'ಆಕಾಶದಲ್ಲಿರುವ ನಕ್ಷತ್ರಗಳನ್ನು ಎಣಿಸಿಬಿಡಬಹುದೇನೋ. ಆದರೆ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ಎಷ್ಟು ಚುನಾವಣೆಗಳಲ್ಲಿ ಸೋಲಿಸಿದ್ದಾರೆ ಎನ್ನುವುದನ್ನು ಲೆಕ್ಕ ಮಾಡುವುದು ಕಷ್ಟ' ಎಂದು ಟೀಕಿಸಿದ್ದಾರೆ.

ADVERTISEMENT

ಸುಶಾಸನ, ಭ್ರಷ್ಟಾಚಾರ ಮುಕ್ತ ಆಡಳಿತ, ಅಭಿವೃದ್ಧಿ ರಾಜಕಾರಣದಿಂದಾಗಿ ಜನಮನ್ನಣೆ ಗಳಿಸಿರುವ ನಿತೀಶ್ ಕುಮಾರ್ ಅವರ ನೇತೃತ್ವದ ಎನ್‌ಡಿಎ ಸರ್ಕಾರದ ಮುಂದೆ ಜಂಗಲ್ ರಾಜ್ ಕುಖ್ಯಾತಿಯ ಆರ್‌ಜೆಡಿ - ಕಾಂಗ್ರೆಸ್ ಮಹಾಘಟಬಂಧನ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಕಾಂಗ್ರೆಸ್ ಪಕ್ಕಕ್ಕೆ ಚೆನ್ನಾಗಿ ಗೊತ್ತಿತ್ತು. ಆದ್ದರಿಂದಲೇ ರಾಹುಲ್ ಗಾಂಧಿ ಅವರು ಮುಖಭಂಗ ತಪ್ಪಿಸಿಕೊಳ್ಳಲು ವೋಟ್ ಚೋರಿ ಎಂಬ ಕಟ್ಟುಕಥೆ ಮೂಲಕ ಜನರನ್ನ ದಿಕ್ಕು ತಪ್ಪಿಸಲು ಹೊರಟಿತ್ತು. ಆದರೆ ಬಿಹಾರದ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ವೋಟ್ ಚೋರಿ ಪ್ರಹಸನವನ್ನು ಸಾರಾಸಗಟಾಗಿ ತಿರಸ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಅವರ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಮತ್ತೊಮ್ಮೆ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

ಹರಿಯಾಣ, ಮಹಾರಾಷ್ಟ್ರ, ಬಿಹಾರದಲ್ಲಿ ಬಂದಿರುವ ಸ್ಥಿತಿಯೇ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲೂ ಬರುವ ದಿನ ಬಹಳ ದೂರವಿಲ್ಲ. ಈಗಾಗಲೇ ಜನಮನ್ನಣೆ ಕಳೆದುಕೊಂಡಿರುವ ಕಾಂಗ್ರೆಸ್‌ ಪಕ್ಷ ಕರ್ನಾಟಕದಲ್ಲೂ ಧೂಳೀಪಟ ಆಗುವುದು ನೂರಕ್ಕೆ ನೂರು ಗ್ಯಾರಂಟಿ ಎಂದಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಎನ್‌ಡಿಎ ಮೈತ್ರಿ ಮತ್ತೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವೆನಿಸಿದೆ. ಬಿಜೆಪಿ-ಜೆಡಿಯು ಸೇರಿದಂತೆ ಎನ್‌ಡಿಎ ಮೈತ್ರಿಯು ಬಹುಮತಕ್ಕೆ ಬೇಕಾಗಿರುವ ಮ್ಯಾಜಿಕ್ ಸಂಖ್ಯೆಯನ್ನು ದಾಟಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಅತ್ತ ಆರ್‌ಜೆಡಿ-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನಕ್ಕೆ ಭಾರಿ ಹಿನ್ನಡೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.