ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಬೆಂಗಳೂರು: ಪ್ರತಿಭಟನಾ ಸಮಾವೇಶಕ್ಕಾಗಿ ನಗರಕ್ಕೆ ಬಂದಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ನಾಮನಿರ್ದೇಶನಕ್ಕೆ ಪಟ್ಟಿ ಅಂತಿಮಗೊಳಿಸುವ ಬಗ್ಗೆ ಕಾಂಗ್ರೆಸ್ ನಾಯಕರ ಜತೆ ಚರ್ಚೆ ನಡೆಸಿದ್ದಾರೆ.
ಸಮಾವೇಶದ ಬಳಿಕ ರಾಹುಲ್ ಅವರು ಸದಾಶಿವನಗರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ತೆರಳಿದರು. ಖರ್ಗೆ ಜೊತೆ ರಾಹುಲ್ ಭೋಜನ ಸೇವಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಇದ್ದರು.
ಬಳಿಕ ಖರ್ಗೆ ಜೊತೆ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಿದ ರಾಹುಲ್, ಅಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆ ಕೆಲಹೊತ್ತು ಸಭೆ ನಡೆಸಿದರು.
‘ಲೋಕಸಭೆ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ ಮತ ಕಳ್ಳತನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮೇಲೆ ದೂರು ದಾಖಲಿಸಲು ಅವಕಾಶ ಇದೆಯೇ ಎಂಬ ಬಗ್ಗೆಯೂ ರಾಹುಲ್ ವಿಚಾರ ವಿನಿಮಯ ನಡೆಸಿದರು’ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.