ADVERTISEMENT

ಚುನಾವಣೆ ಆಯೋಗದ ಮೇಲೆ 'ರಾಗಾ' ಅನುಮಾನ: ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ; HDK

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2025, 5:03 IST
Last Updated 8 ಆಗಸ್ಟ್ 2025, 5:03 IST
<div class="paragraphs"><p>HDK</p></div>

HDK

   

ನವದೆಹಲಿ: ಚುನಾವಣೆ ಆಯೋಗದ ಮೇಲೆ ಅನುಮಾನ ಪಟ್ಟಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ಕುಮಾರಸ್ವಾಮಿ ಪೋಸ್ಟ್‌ನಲ್ಲಿ ಏನಿದೆ?

ಮತಗಳ್ಳತನವಾಗಿದೆ ಎಂದು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ ಪಟ್ಟಿರುವುದು ಕಿಡಿಗೇಡಿ ಪಿತೂರಿಯಾಗಿದೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳಲು ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮುಂದುವರೆದು, ಮತಗಳ್ಳತನ ಆರೋಪಕ್ಕೆ ಒಂದೇ ಮದ್ದು. ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು.ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಅಥವಾ ಒತ್ತಾಯ ಇಷ್ಟೇ; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು  ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡುವ ಮೂಲಕ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.