ADVERTISEMENT

ಮೈಸೂರು: ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 12 ಜನವರಿ 2026, 15:31 IST
Last Updated 12 ಜನವರಿ 2026, 15:31 IST
<div class="paragraphs"><p>ರಾಹುಲ್‌ ಗಾಂಧಿ ಹಾಗೂ ಸಿದ್ದರಾಮಯ್ಯ </p></div>

ರಾಹುಲ್‌ ಗಾಂಧಿ ಹಾಗೂ ಸಿದ್ದರಾಮಯ್ಯ

   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಜ.13) ಮಧ್ಯಾಹ್ನ 1.25ಕ್ಕೆ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮಿಳುನಾಡು ಪ್ರವಾಸ ಕೈಗೊಂಡಿದ್ದು, ಮಾರ್ಗಮಧ್ಯೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅವರನ್ನು ಖುದ್ದಾಗಿ ಬರಮಾಡಿಕೊಳ್ಳುವುದು, ಚರ್ಚಿಸುವುದು ಹಾಗೂ ಬೀಳ್ಕೊಡುವ ಉದ್ದೇಶದಿಂದ ಮುಖ್ಯಮಂತ್ರಿ ಮೈಸೂರಿಗೆ ಬರುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ADVERTISEMENT

ರಾಹುಲ್‌ ಇಲ್ಲಿ ವಿಮಾನ ಬದಲಾವಣೆಗಾಗಿ ಕೆಲಕಾಲ ಇರಲಿದ್ದಾರೆ. ಮಧ್ಯಾಹ್ನ 2ರ ಸುಮಾರಿಗೆ ಬರುವ ಅವರು, 2.35ರ ಸುಮಾರಿಗೆ ತೆರಳಲಿದ್ದಾರೆ. ನೀಲಗಿರಿ ಜಿಲ್ಲೆಯ ಗೂಡ್ಲೂರಿನಲ್ಲಿ ಖಾಸಗಿ ಶಾಲೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಬಳಿಕ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದು, ಇಲ್ಲಿಂದ ನವದಹಲಿಗೆ ತೆರಳುವರು. ಈ ಕಾರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಮೈಸೂರು ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಕಚೇರಿಯಿಂದ ನೀಡಲಾಗಿರುವ ಪ್ರವಾಸ ಕಾರ್ಯಕ್ರಮದಲ್ಲಿ, ಮೈಸೂರಿಗೆ ವಿಶೇಷ ವಿಮಾನದಲ್ಲಿ ಬರುವ ಸಿದ್ದರಾಮಯ್ಯ ಅವರು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ ಸಂಜೆ 6.55ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದಷ್ಟೆ ತಿಳಿಸಲಾಗಿದೆ.

ಮುಖ್ಯಮಂತ್ರಿ ಜೊತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರವಾಸವೂ ನಿಗದಿಯಾಗಿದೆ. ಇಬ್ಬರು ಒಂದೇ ವಿಮಾನದಲ್ಲಿ ಬಂದು ವಾಪಸಾಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.