ರಾಯಚೂರು: ನಗರದಲ್ಲಿ ಈಚೆಗೆಕೊಲೆಯಾಗಿರುವ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ನಟಪ್ರಕಾಶ್ ರೈ ಹಾಗೂಮಹಿಳಾ ಸಂಘಟನೆಗಳೊಂದಿಗೆ ಹೋರಾಟ ಆರಂಭಿಸುವುದಾಗಿ ಕಾದಂಬರಿಕಾರ ಕುಂ.ವೀರಭದ್ರಪ್ಪ ಹೇಳಿದರು.
ಮೃತ ವಿದ್ಯಾರ್ಥಿನಿ ಪಾಲಕರನ್ನು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಅವರು, ‘ಮೇಲ್ನೋಟಕ್ಕೆ ಆತ್ಮಹತ್ಯೆ ಎನ್ನುವ ನಿರ್ಧಾರಕ್ಕೆ ಪೊಲೀಸರು ಬರಬಾರದು. ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.
‘ರಾಯಚೂರು ಕರ್ನಾಟಕದಲ್ಲಿದೆ. ಇದು ಉತ್ತರ ಪ್ರದೇಶ ಅಥವಾ ಬಿಹಾರವಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಸಿಗಬೇಕು. ಈ ವಿದ್ಯಾರ್ಥಿನಿಯು ರಕ್ಷಣೆ ಇಲ್ಲದ್ದಕ್ಕಾಗಿಸಾವನ್ನಪ್ಪಿದ್ದಾಳೆ. ಆಕೆಯ ಮೇಲೆ ನಡೆದ ಹಲ್ಲೆ, ಕೊಲೆಯು ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.