ಬೆಂಗಳೂರು: ಜನಿವಾರ ಮತ್ತು ಮಾಂಗಲ್ಯ ಸೂತ್ರವನ್ನು ಧರಿಸಿಕೊಂಡು ರೈಲ್ವೆ ಇಲಾಖೆಯ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ್ ಪತ್ರ ಬರೆದಿದ್ದಾರೆ.
ನಿಯಮದಲ್ಲಿ ಬದಲಾವಣೆ ಆಗದಿದ್ದರೆ ಅನಿವಾರ್ಯವಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ಪತ್ರದಲ್ಲೇನಿದೆ?
'ದಿನಾಂಕ 29-04-2025ರಂದು ಮಂಗಳವಾರ ಬೆಳಗ್ಗೆ 9.00 ಗಂಟೆಗೆ ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಮಂಗಳೂರಿನ ಬೊಂದಲ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯನ್ನು ಬರೆಯುವವರು ಜನಿವಾರ ಮತ್ತು ಮಾಂಗಲ್ಯ ಸೂತ್ರವನ್ನು ತೆಗದಿಟ್ಟು ಪರೀಕ್ಷೆ ಬರೆಯಬೇಕೆಂದು ಪರೀಕ್ಷಾ ನಿಯಮಾವಳಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಇಂತಹ ನಿಯಮಾವಳಿಗಳು ಹಿಂದು ಧರ್ಮಕ್ಕೆ ಮತ್ತು ಬ್ರಾಹ್ಮಣರ ಪದ್ಧತಿಗಳು ಮತ್ತು ನಂಬಿಕೆಗೆ ವಿರುದ್ಧವಾಗಿದೆ ಮತ್ತು ಸಮಾಜದಲ್ಲಿ ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುವಂತಿದೆ.
ದಯಮಾಡಿ ಸದರಿ ನಿಯಮಾವಳಿಯನ್ನು ಸರಿಪಡಿಸಿ ಜನಿವಾರ ಮತ್ತು ಮಾಂಗಲ್ಯ ಸೂತ್ರವನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕೆಂದು ವಿನಂತಿಸುತ್ತೇವೆ. ಇಲ್ಲವಾದಲ್ಲಿ ಇಂತಹ ಧೋರಣೆಯನ್ನು ಖಂಡಿಸಿ ನ್ಯಾಯಕ್ಕಾಗಿ ಪ್ರತಿಭಟನೆ ಅನಿವಾರ್ಯವಾಗಿ ಮಾಡಬೇಕಾಗುತ್ತದೆ' ಎಂದು ರೈಲ್ವೆ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.