ADVERTISEMENT

‘ರೈಲ್ವೆ ಹಳೆ ಯೋಜನೆಗಳಿಗೆ ಆದ್ಯತೆ’

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 20:16 IST
Last Updated 1 ಜೂನ್ 2019, 20:16 IST
ಸುರೇಶ ಅಂಗಡಿ
ಸುರೇಶ ಅಂಗಡಿ    

ಬೆಳಗಾವಿ: ‘ಹೊಸ ಯೋಜನೆಗಳಿಗಿಂತ ಈಗಾಗಲೇ ಘೋಷಿಸಿರುವ ರೈಲ್ವೆ ಹಳೆ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

‘ಬೆಳಗಾವಿ, ಹುಬ್ಬಳ್ಳಿ, ಬೆಂಗಳೂರಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಮುಂದಿನ ಕಾರ್ಯಯೋಜನೆ ಬಗ್ಗೆ ತಿಳಿಸಲಾಗುವುದು’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಸಚಿವರಾದ ನಂತರ ಮೊದಲ ಬಾರಿಗೆ ಇಲ್ಲಿಗೆ ಬಂದ ಸಚಿವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಸವದತ್ತಿಗೆ ರೈಲು ಸಂಪರ್ಕ ಕಲ್ಪಿಸುವ ಬಗ್ಗೆಯೂ ಚರ್ಚೆ ನಡೆದಿದೆ ಎಂದರು.

ADVERTISEMENT

ಜನರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಜಾರಿಗೆ ತರಲಾಗುವುದು. ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಸಹಕಾರ ನೀಡಿದರೆ ಇನ್ನಷ್ಟು ಯೋಜನೆಗಳನ್ನು ರೂಪಿಸಲಾಗುವುದು ಎಂದು ಸುರೇಶ್‌ ಅಂಗಡಿ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.