ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಾಳಿ–ಮಳೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 17:03 IST
Last Updated 11 ಏಪ್ರಿಲ್ 2019, 17:03 IST
ಬೆಳ್ತಂಗಡಿ ಪೇಟೆಯಲ್ಲಿ ಗುರುವಾರ ಸಂಜೆ ಗಾಳಿಯೊಂದಿಗೆ ಬಿರುಸಿನ ಮಳೆ ಸುರಿಯಿತು.
ಬೆಳ್ತಂಗಡಿ ಪೇಟೆಯಲ್ಲಿ ಗುರುವಾರ ಸಂಜೆ ಗಾಳಿಯೊಂದಿಗೆ ಬಿರುಸಿನ ಮಳೆ ಸುರಿಯಿತು.   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ಸಹಿತ ಹಲವೆಡೆ ಗುರುವಾರ ಭಾರಿ ಗಾಳಿ ಸಹಿತ ಬಿರುಸಿನ ಮಳೆ ಸುರಿಯಿತು.

ಬಂಟ್ವಾಳ ತಾಲ್ಲೂಕಿನ ಮಾಣಿ ಸಮೀಪ ಬುಡೋಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗಾಳಿಗೆ ದೊಡ್ದ ಗಾತ್ರದ ಮರ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಸ್ವಲ್ಪ ಹೊತ್ತು ಅಡಚಣೆ ಉಂಟಾಯಿತು.

ಗಾಳಿಯಿಂದಾಗಿ ಅಲ್ಲಲ್ಲಿ ಕೆಲವೊಂದು ಮರಗಳ ರೆಂಬೆಗಳು, ಅಡಿಕೆ ಮರಗಳು ಮುರಿದು ಬಿದ್ದಿವೆ.

ADVERTISEMENT

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸುತ್ತಮುತ್ತ ಸಹ ಮಳೆ ಸುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.