ನಾಪೋಕ್ಲು: ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಉತ್ತಮ ಮಳೆಯಾಯಿತು. ನಡುನಡುವೆ ಬಿಡುವು ಕೊಟ್ಟು ರಭಸದ ಮಳೆ ಸುರಿಯಿತು.
ಸಮೀಪದ ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗಿದೆ. ಬೆಟ್ಟಶ್ರೇಣಿಗಳಲ್ಲಿ ಮಳೆ ಸುರಿದ ಪರಿಣಾಮ ನದಿ, ತೋಡುಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂತು. ಅಲ್ಲಲ್ಲಿ ಮಳೆಯಾದ ಪರಿಣಾಮ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮಧ್ಯಾಹ್ನದ ನಂತರ ಮಳೆ ಇಳಿಮುಖಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.