ADVERTISEMENT

ವಿವಿಧೆಡೆ ಮಳೆ: ಸಿಡಿಲು ಬಡಿದು ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2020, 19:30 IST
Last Updated 10 ಅಕ್ಟೋಬರ್ 2020, 19:30 IST
ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಸಮೀಪದ ತಾರಾನಗರದ ನಾರಿಹಳ್ಳ ಜಲಾಶಯವು ಎರಡನೇ ಬಾರಿಗೆ ಭರ್ತಿಯಾಗಿ ಹರಿಯಿತು
ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಸಮೀಪದ ತಾರಾನಗರದ ನಾರಿಹಳ್ಳ ಜಲಾಶಯವು ಎರಡನೇ ಬಾರಿಗೆ ಭರ್ತಿಯಾಗಿ ಹರಿಯಿತು   

ಬೆಂಗಳೂರು: ರಾಜ್ಯದ ಹಲವು ಭಾಗದಲ್ಲಿ ಗುಡುಗು–ಸಿಡಿಲು ಸಹಿತ ಶನಿವಾರ ರಭಸದ ಮಳೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ತಾಯಿ, ಮಗಳು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯಬಸವನಬಾಗೇವಾಡಿ ತಾಲ್ಲೂಕಿನ ಕಡಕೋಳ ಗ್ರಾಮದಲ್ಲಿ ಮಹಾದೇವಿ ಭಜಂತ್ರಿ (40) ಹಾಗೂ ಅವರ ಮಗಳು ಸೋನಿ ಭಜಂತ್ರಿ (12) ಮತ್ತು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡು ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಗಾಳೆಪ್ಪ (50) ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ ಒಂದೇ ದಿನದಲ್ಲಿ 14 ಸೆಂ.ಮೀ. ದಾಖಲೆಯ ಮಳೆಯಾಗಿದೆ. 2009ರಲ್ಲಿ 18‌ ಸೆಂ.‌ಮೀ ಮಳೆಯಾಗಿತ್ತು. ದಾವಣಗೆರೆ ಜಿಲ್ಲೆಯ ವಿವಿಧೆಡೆ ಸುರಿದ ಭಾರಿ ಮಳೆಗೆ ಮನೆ, ಗದ್ದೆಗಳಿಗೆ ನೀರು ನುಗ್ಗಿದೆ.

ADVERTISEMENT

ಧಾರವಾಡ, ಬೆಳಗಾವಿ, ವಿಜಯಪುರ, ಹಾವೇರಿ ಹಾಗೂ ಬಳ್ಳಾರಿ, ಬಾಗಲಕೋಟೆ, ಕೊಡಗು, ಹಾಸನ, ಮಂಡ್ಯ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.