ADVERTISEMENT

22ರ ಬಳಿಕ ರಾಜ್ಯದಲ್ಲಿ ಮತ್ತೆ ಮಳೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 21:59 IST
Last Updated 19 ಆಗಸ್ಟ್ 2022, 21:59 IST
   

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 22ರ ಬಳಿಕ ಮತ್ತೆ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾರದಿಂದ ಮಳೆ ಬಿಡುವು ನೀಡಿ, ಬಿಸಿಲ ವಾತಾವರಣ ಕಂಡುಬಂದಿತ್ತು.

ಆಗಸ್ಟ್‌ 22ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಹಾಗೂ 23ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT