ADVERTISEMENT

ನಾಳೆಯಿಂದ ಕರಾವಳಿಯಲ್ಲಿ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 18:06 IST
Last Updated 10 ಜೂನ್ 2020, 18:06 IST
   

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ 12ರಿಂದ 14ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಎರಡೂ ದಿನಗಳು 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಕಡಲ ತೀರದ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ADVERTISEMENT

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.12ರಂದು ಹೆಚ್ಚು ಮಳೆಯಾಗುವ ಹಿನ್ನೆಲೆಯಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಭರಮಸಾಗರದಲ್ಲಿ ಬುಧವಾರ 3 ಸೆಂ.ಮೀ.ಮಳೆಯಾಗಿದೆ. ಮೂಡುಬಿದ್ರೆ, ಕೋಟಾ 2, ಗೋಕರ್ಣ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಹೊನ್ನಾವರ, ನಿಪ್ಪಾಣಿ, ವಿರಾಜಪೇಟೆಯಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ. ರಾಯಚೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.