ADVERTISEMENT

11 ಜಿಲ್ಲೆಗಳಲ್ಲಿ ಇಂದು 'ಆರೆಂಜ್ ಅಲರ್ಟ್'

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 19:22 IST
Last Updated 12 ಜೂನ್ 2020, 19:22 IST

ಬೆಂಗಳೂರು: ರಾಜ್ಯದ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂನ್‌ 13ರಂದು ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿರುವಹಿನ್ನೆಲೆಯಲ್ಲಿ ಶನಿವಾರ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಭಾನುವಾರವೂ ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ.

'ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕಾಗಿದೆ. ಇದರ ಪರಿಣಾಮ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನಗಳವರೆಗೆ ಭಾರಿ ಮಳೆಯಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಬಳಿಕ ಮಳೆ ಪ್ರಮಾಣ ತಗ್ಗಲಿದೆ' ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರವಾರ, ಗೋಕರ್ಣ 8, ಅಂಕೋಲ, ಮಂಕಿ 7, ಬಸವನ ಬಾಗೇವಾಡಿ 6, ಪಣಂಬೂರು, ಸುಬ್ರಹ್ಮಣ್ಯ, ಮಂಗಳೂರು, ಹೊಸನಗರ, ಹೆಸರಘಟ್ಟದಲ್ಲಿ ತಲಾ 3 ಸೆಂ.ಮೀ.ಮಳೆಯಾಗಿದೆ. ಕಲಬುರ್ಗಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.