ADVERTISEMENT

ಕರಾವಳಿ: ಆ.4ರವರೆಗೆ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 20:28 IST
Last Updated 30 ಜುಲೈ 2020, 20:28 IST
ಮಳೆ
ಮಳೆ   

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 31ರಿಂದ ಆಗಸ್ಟ್ 4ರವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆ.4ರವರೆಗೂ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3 ಮೀಟರ್ ಗಳಷ್ಟು ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ADVERTISEMENT

ಮುಂಗಾರು ಚುರುಕುಗೊಂಡಿದ್ದು ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಕಲಬುರ್ಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಮಳೆ-ಎಲ್ಲಿ, ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಗರಿಷ್ಠ 16 ಸೆಂ.ಮೀ ಮಳೆಯಾಗಿದೆ. ಸುಳ್ಯ 11, ಆಗುಂಬೆ 9, ಧರ್ಮಸ್ಥಳ 8, ಕೊಪ್ಪಳ, ಚಿತ್ರದುರ್ಗ 7, ಹಾವೇರಿ 6, ವಿಜಯಪುರ, ಪಿರಿಯಾಪಟ್ಟಣ 4, ಮೂಡುಬಿದರೆ, ಮಂಗಳೂರು, ಉಡುಪಿ, ಬಾಗಲಕೋಟೆ, ದಾವಣಗೆರೆ, ಚಾಮರಾಜನಗರ 3 ಸೆಂ.ಮೀ ಮಳೆ ಯಾಗಿದೆ.

ಧಾರಾಕಾರ ಮಳೆ: ಕಲಬುರ್ಗಿ ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಮತ್ತು ರಾಯಚೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯಿತು. ಬಾಗಲಕೋಟೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಯಲ್ಲಿ ಉತ್ತಮ ಮಳೆಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ಗುರುವಾರ ಭಾರಿ ಮಳೆಯಾಗಿದ್ದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠಕ್ಕೆ ನೀರು ನುಗ್ಗಿದೆ. ಇದೇ ಗ್ರಾಮದ ಹರಣಶಿಕಾರಿ ಓಣಿಯ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.