ADVERTISEMENT

ನಾಲ್ಕು ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್' ಘೋಷಣೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 19:49 IST
Last Updated 1 ಸೆಪ್ಟೆಂಬರ್ 2020, 19:49 IST
ಚಿಕ್ಕಮಗಳೂರಿನಲ್ಲಿ ಮಂಗಳವಾರ ಜೋರು ಮಳೆ ಸುರಿಯಿತು
ಚಿಕ್ಕಮಗಳೂರಿನಲ್ಲಿ ಮಂಗಳವಾರ ಜೋರು ಮಳೆ ಸುರಿಯಿತು   

ಬೆಂಗಳೂರು: ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.2ರಿಂದ 5ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬುಧವಾರದಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ADVERTISEMENT

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆ ಸುರಿಯಬಹುದು.

ಮಳೆ-ಎಲ್ಲಿ, ಎಷ್ಟು?: ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಆನೇಕಲ್, ಮಳವಳ್ಳಿ 7, ಚಾಮರಾಜನಗರ 6, ಮಂಡ್ಯ, ತಿಪಟೂರು 5, ಮಾಲೂರು, ಮದ್ದೂರು 4, ರಾಮನಗರ 3, ಶಿರಾ, ಕೊಳ್ಳೇಗಾಲ, ಬೆಂಗಳೂರು, ವಿರಾಜಪೇಟೆ 2, ತುಮಕೂರು, ಹೊಸಕೋಟೆ, ಬಂಗಾರಪೇಟೆ, ಗುಬ್ಬಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.