ADVERTISEMENT

ಕರಾವಳಿಯಲ್ಲಿ ಇಂದು ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 2:36 IST
Last Updated 18 ಜೂನ್ 2020, 2:36 IST

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂ.18ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೆಚ್ಚು ಮಳೆ ಸುರಿಯುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುರುವಾರ 'ಆರೆಂಜ್ ಅಲರ್ಟ್' ಘೋಷಿಸಿದೆ. ಬೆಳಗಾವಿ, ಹಾವೇರಿ, ಕಲಬುರ್ಗಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಿದೆ.

ಕರಾವಳಿಯಲ್ಲಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ADVERTISEMENT

ಅಂಕೋಲಾದಲ್ಲಿ ಬುಧವಾರ 16 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮೂಡುಬಿದ್ರೆ 15, ಕಾರವಾರ 14, ಕೊಲ್ಲೂರು 13, ಗೋಕರ್ಣ, ಹೊನ್ನಾವರ, ಕುಂದಾಪುರ, ಕೋಟ, ಪಣಂಬೂರು 12, ಮಂಗಳೂರು, ಹೊಸನಗರ, 10, ಕುಮಟಾ, ಗೇರುಸೊಪ್ಪ 9, ಕಾರ್ಕಳ 8, ಧರ್ಮಸ್ಥಳ, ಭಾಗಮಂಡಲ, ಹುಂಚದಕಟ್ಟೆಯಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.