ADVERTISEMENT

ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಮೇ 2021, 5:48 IST
Last Updated 5 ಮೇ 2021, 5:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು:‌ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 5ರಿಂದ 7ರವರೆಗೆಹವಾಮಾನ ವೈಪರೀತ್ಯದಿಂದಾಗಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಹಗುರದಿಂದ ಸಾಧಾರಣ ಮಳೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’.

‘ಉಳಿದ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

ADVERTISEMENT

ಮಳೆ–ಎಲ್ಲಿ, ಎಷ್ಟು?: ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಗರಿಷ್ಠ 5 ಸೆಂ.ಮೀ ಮಳೆ ದಾಖಲಾಗಿದೆ. ಸುಬ್ರಹ್ಮಣ್ಯ, ಕುಶಾಲನಗರ 2, ಕೋಟ ಹಾಗೂ ಸಂತೆಬೆನ್ನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕಲಬುರ್ಗಿಯಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ರಾಯಚೂರು, ಬಾಗಲಕೋಟೆ, ದಾವಣಗೆರೆ 37, ಗದಗ, ವಿಜಯಪುರ, ಕಾರವಾರ 36, ಚಿಕ್ಕಮಗಳೂರಿನಲ್ಲಿ 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.