ADVERTISEMENT

ರಾಜ್ಯದ ವಿವಿಧೆಡೆ ಮಾರ್ಚ್‌ 22ರಿಂದ ನಾಲ್ಕು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2025, 23:30 IST
Last Updated 19 ಮಾರ್ಚ್ 2025, 23:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧೆಡೆ ಇದೇ 22ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 22ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಕೆಲ ಸ್ಥಳಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

23, 24 ಮತ್ತು 25 ರಂದು ಕೂಡ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳು ಗರಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ADVERTISEMENT

ರಾಜ್ಯದ ವಿವಿಧೆಡೆ ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಂಡಿದ್ದು, ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (40.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಬಾಗಲಕೋಟೆ (40.5 ಡಿಗ್ರಿ ಸೆಲ್ಸಿಯಸ್), ರಾಯಚೂರು (40.5 ಡಿಗ್ರಿ ಸೆಲ್ಸಿಯಸ್) ಹಾಗೂ ಬೀದರ್‌ನಲ್ಲಿಯೂ (40.2 ಡಿಗ್ರಿ ಸೆಲ್ಸಿಯಸ್) ಅಧಿಕ ಉಷ್ಣಾಂಶ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.