ADVERTISEMENT

ರಾಜ್ಯದಲ್ಲಿ ಐದು ದಿನ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 18:19 IST
Last Updated 17 ಜುಲೈ 2020, 18:19 IST
ಚಿಕ್ಕಮಗಳೂರಿನ ಕಳಸ- ಹೊರನಾಡು ರಸ್ತೆಯ ಹೆಬ್ಬೊಳೆಯಲ್ಲಿ ಭದ್ರಾ ನದಿಯು ಗರಿಷ್ಠ ಮಟ್ಟದಲ್ಲಿ ಹರಿಯುತ್ತಿದೆ.
ಚಿಕ್ಕಮಗಳೂರಿನ ಕಳಸ- ಹೊರನಾಡು ರಸ್ತೆಯ ಹೆಬ್ಬೊಳೆಯಲ್ಲಿ ಭದ್ರಾ ನದಿಯು ಗರಿಷ್ಠ ಮಟ್ಟದಲ್ಲಿ ಹರಿಯುತ್ತಿದೆ.   

ಬೆಂಗಳೂರು: ‘ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.

‘ಉತ್ತರ ಕನ್ನಡ,ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು’ ಎಂದು ಸೂಚಿಸಿದ್ದಾರೆ.

‘ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಜು.20ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಘಟ್ಟ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಜು.21ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಬಹುದು’ ಎಂದು ಅವರು ತಿಳಿಸಿದರು.

ADVERTISEMENT

ಮಳೆ, ಎಲ್ಲಿ ಎಷ್ಟು?: ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಗರಿಷ್ಠ 19 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ, ಕೊಲ್ಲೂರು 13, ಕುಂದಾಪುರ, ಪುತ್ತೂರು, ಚಿಕ್ಕಮಗಳೂರು 9, ಉಪ್ಪಿನಂಗಡಿ, ಮೂಡಿಗೆರೆ 8, ಮಡಿಕೇರಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.