ADVERTISEMENT

ಮಳೆ ಸಾಧ್ಯತೆ: ರಾಜ್ಯದ 7 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

​ಪ್ರಜಾವಾಣಿ ವಾರ್ತೆ
Published 12 ಮೇ 2020, 2:43 IST
Last Updated 12 ಮೇ 2020, 2:43 IST
   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 12ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಈ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗಳವಾರ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಇದೇ 13ರಂದು ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. 14ರಿಂದ ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ.

ADVERTISEMENT

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಸೋಮವಾರ 6 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹೊಸದುರ್ಗ, ಅಥಣಿ, ಪುತ್ತೂರು 5, ನರಗುಂದ, ಯಲ್ಲಾಪುರ 3, ಬಂಟ್ವಾಳ, ಹಿರೇಕೆರೂರು, ಮುದ್ಗಲ್, ಕೊಟ್ಟಿಗೆಹಾರ, ಹರಪನಹಳ್ಳಿ 2, ಸಿದ್ದಾಪುರ, ಕಾರವಾರ, ಮಹಾಲಿಂಗಪುರ, ಬಾದಾಮಿ, ಕುಷ್ಟಗಿ, ಬೈಲಹೊಂಗಲ, ಕಳಸ ಹಾಗೂ ಸಾಗರದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ರಾಯಚೂರು ಹಾಗೂ ಕಲಬುರ್ಗಿಯಲ್ಲಿ ತಲಾ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಚಿಂತಾಮಣಿ, ಚಿತ್ರದುರ್ಗ, ದಾವಣಗೆರೆ 37, ಶಿವಮೊಗ್ಗ, ವಿಜಯಪುರ, ಬೆಳಗಾವಿ 36, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.