ADVERTISEMENT

ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಕಾರು, ಚಾಲಕ ಸಾವು

ಸೇತುವೆಗಳು ಮುಳುಗಡೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2022, 21:04 IST
Last Updated 9 ಆಗಸ್ಟ್ 2022, 21:04 IST
ಚಿಕ್ಕೋಡಿ ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಡಿಯಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ಸಂಗಮಸ್ಥಾನದಲ್ಲಿರುವ ದತ್ತ ದೇಗುಲ ಜಲಾವೃತಗೊಂಡಿದೆ
ಚಿಕ್ಕೋಡಿ ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಡಿಯಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ಸಂಗಮಸ್ಥಾನದಲ್ಲಿರುವ ದತ್ತ ದೇಗುಲ ಜಲಾವೃತಗೊಂಡಿದೆ   

ಬೆಂಗಳೂರು: ರಾಜ್ಯದ ಹಲವೆಡೆ ಮಂಗಳವಾರ ಮಳೆ ಆರ್ಭ‌ಟಿಸಿದೆ. ಸೇತುವೆಗಳು ಮುಳುಗಡೆಯಾಗಿವೆ. ಹೊಲ, ತೋಟಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಸಾತ್ಕೋಳಿ ಬಳಿ ಹಳ್ಳದ ಸೇತುವೆಯಲ್ಲಿ ಸಾಗುವಾಗ ಕಾರು ಕೊಚ್ಚಿ ಹೋಗಿ, ಕಾರಿನಲ್ಲಿದ್ದ ಕಡಹಿನಬೈಲಿನ ಅರಶಿನಗೆರೆಯ ಪ್ರಸನ್ನ (50) ಮೃತಪಟ್ಟಿದ್ದಾರೆ.

ಗದಗ ಜಿಲ್ಲೆಯಲ್ಲಿ ಕಟಾವಿಗೆ ಬಂದಿದ್ದ 73 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಹೆಸರು ಬೆಳೆ ಹಾನಿಯಾಗಿದೆ.

ADVERTISEMENT

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಭಾರಿ ಹೆಚ್ಚಳವಾಗಿರುವುದರಿಂದ ವಿಜಯನಗರ–ಬಳ್ಳಾರಿಯಲ್ಲಿ ಮೂರು ಸೇತುವೆಗಳು ಮುಳುಗಿ, ಸಂಪರ್ಕ ಕಡಿತಗೊಂಡಿದೆ.

ಮಡಿಕೇರಿ- ಮಂಗಳೂರು ರಸ್ತೆಯಲ್ಲಿ ಮದೆನಾಡು ಸಮೀಪ ಗುಡ್ಡದಲ್ಲಿ ದೊಡ್ಡ ಪ್ರಮಾಣದ ಬಿರುಕು ಕಾಣಿಸಿಕೊಂಡು ಆತಂಕ ಮೂಡಿಸಿದೆ.

ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವ ಕಾರಣ ಗಂಗಾವತಿ–ಕಂಪ್ಲಿ ಸಂಪರ್ಕ ಕಲ್ಪಿ
ಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನವವೃಂದಾವನ ಜನ ಸಂಪರ್ಕ ಕಳೆದುಕೊಂಡಿದೆ. ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.