ADVERTISEMENT

ಚಿಕ್ಕಮಗಳೂರಿನಲ್ಲಿ ಮಳೆ

​ಪ್ರಜಾವಾಣಿ ವಾರ್ತೆ
Published 19 ಮೇ 2019, 19:27 IST
Last Updated 19 ಮೇ 2019, 19:27 IST

ಚಿಕ್ಕಮಗಳೂರು: ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಸಂಜೆ ಗುಡುಗುಸಹಿತ ಮಳೆ ಸುರಿಯಿತು.

ಸಂಜೆ 5ಗಂಟೆ ಸುಮಾರಿಗೆ ಮಳೆ ಶುರುವಾಯಿತು. ಗುಡುಗಿನಆರ್ಭಟ ಇತ್ತು. ಗಾಳಿಯ ಅಬ್ಬರವೂ ಇತ್ತು. ಮಳೆ ತುಂತುರು ಶುರುವಾಗಿ ನಂತರ ರಭಸವಾಗಿ ಸುರಿಯಿತು. ಸುಮಾರು 20 ನಿಮಿಷ ಮಳೆಯಾಯಿತು.

ಮೂಡಿಗೆರೆ ತಾಲ್ಲೂಕಿನಾದ್ಯಂತ ಭಾನುವಾರ ಮಧ್ಯಾಹ್ನ ಉತ್ತಮ ಮಳೆಯಾಯಿತು. ಪಟ್ಟಣ ಸೇರಿದಂತೆ ಭೂತನಕಾಡು, ಕುದುರೆಗುಂಡಿ, ಹ್ಯಾಂಡ್ ಪೋಸ್ಟ್, ಬಿದರಹಳ್ಳಿ, ಮುಗ್ರಹಳ್ಳಿ, ಹೊರಟ್ಟಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಒಂದು ತಾಸಿಗೂ ಅಧಿಕ ಕಾಲ ಮಳೆಯಾಗಿದೆ.

ADVERTISEMENT

ಕಳಸ ಪಟ್ಟಣದ ಆಸುಪಾಸಿನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಅರ್ಧ ಗಂಟೆ ಕಾಲ ಮಳೆಯಾಗಿದೆ.ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣ ಮತ್ತು ಐಮಂಗಲ ಹೋಬಳಿ ಸೇರಿದಂತೆ ವಿವಿಧೆಡೆ ಭಾನುವಾರ ಸಂಜೆ ಸೋನೆ ಮಳೆಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.