ADVERTISEMENT

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2019, 20:15 IST
Last Updated 12 ಆಗಸ್ಟ್ 2019, 20:15 IST

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ ಆಗಸ್ಟ್‌ 14ರ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಪಶ್ಚಿಮ ಹಾಗೂ ನೈರುತ್ಯ ದಿಕ್ಕಿನಿಂದ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.5ರಿಂದ 3.9 ಮೀಟರ್‌ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ತಾಪಮಾನ ಗರಿಷ್ಠ 28, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕಮ್ಮರಡಿ 7, ಕೊಲ್ಲೂರು, ಸಿದ್ದಾಪುರ, ಆಗುಂಬೆಯಲ್ಲಿ ತಲಾ 6 ಸೆಂ.ಮೀ ಮಳೆ ಬಿದ್ದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.