ADVERTISEMENT

ಮುಂದುವರಿದ ಮಳೆ: ಉಕ್ಕಿ ಹರಿದ ಗುಂಡಬಾಳ, ಹಲವು ಮನೆಗಳು ಜಲಾವೃತ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 6:20 IST
Last Updated 16 ಜುಲೈ 2022, 6:20 IST
   

ಕಾರವಾರ: ಉತ‌್ತರ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಜೋರಾಗಿ ಮಳೆಯಾಗುತ್ತಿದೆ. ಹಲವು ಪ್ರದೇಶಗಳಲ್ಲಿ ಹಳ್ಳ, ಚರಂಡಿಯ ನೀರು ಉಕ್ಕಿ ಹರಿಯುತ್ತಿದೆ.

ಹೊನ್ನಾವರ ತಾಲ್ಲೂಕಿನ ಗುಂಡಬಾಳ ನದಿಯಲ್ಲಿ ಪ್ರವಾಹ ಉಂಟಾಗಿದೆ. ಸುತ್ತಮುತ್ತಲಿನ ಹಲವು ಮನೆಗಳು ಜಲಾವೃತವಾಗಿವೆ. ಹಲವರನ್ನು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಲಾಗಿದೆ. ಅಡಿಕೆ, ತೆಂಗಿನ ತೋಟಗಳಿಗೂ ನೀರು ನುಗ್ಗಿದೆ.

ಕಾರವಾರದಲ್ಲಿ ಶುಕ್ರವಾರ ತಡರಾತ್ರಿಯಿಂದಲೇ ಜೋರಾಗಿ ಗಾಳಿಯೊಂದಿಗೆ ಮಳೆ ಬೀಳುತ್ತಿದೆ. ಕದ್ರಾ ಜಲಾಶಯದಿಂದ ಶನಿವಾರ ಬೆಳಿಗ್ಗೆ 8ರ ಅವಧಿಯಲ್ಲಿ 38,290 ಕ್ಯುಸೆಕ್‌ಗಳಷ್ಟು ನೀರನ್ನು ಕಾಳಿ ನದಿಗೆ ಹರಿಸಲಾಗಿದೆ. ಜಿಲ್ಲೆಯಾದ್ಯಂತ ದಟ್ಟವಾಗಿ ಮೋಡ ಕವಿದಿದ್ದು, ವರ್ಷಧಾರೆ ಮುಂದುವರಿಯುವ ಲಕ್ಷಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.