ADVERTISEMENT

ಸಿಡಿಲು ಬಡಿದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 1 ಮೇ 2020, 21:07 IST
Last Updated 1 ಮೇ 2020, 21:07 IST

ಬೆಂಗಳೂರು:ಮಲೆನಾಡು, ಕರಾವಳಿಯಲ್ಲಿ ಶುಕ್ರವಾರ ಹದವಾದ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸತ್ತಿದ್ದಾರೆ.

ಮಧುರೆ ಗ್ರಾಮದಲ್ಲಿ ತೆಂಗಿನ ಮರದ ಕೆಳಗೆ ಕುಳಿತಿದ್ದ ಗೀತಮ್ಮ (42) ಸಿಡಿಲು ಬಡಿದ್ದು ಸತ್ತಿದ್ದು, ಇವರ ಪತಿ ಸದಾಶಿವಪ್ಪ ಎಮ್ಮೆ ಹೊಡೆಯಲು ಹೋಗಿದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಇದೇ ತಾಲ್ಲೂಕಿನ ಆಲಗಟ್ಟ ಗ್ರಾಮದಲ್ಲಿ ಬಿರುಗಾಳಿ, ಮಳೆಗೆ ತೆಂಗಿನ ಮರವೊಂದು ಉರುಳಿ, ಮರದ ಕೆಳಗೆ ನಿಂತಿದ್ದ ರೈತ ರೇಣುಕಾರಾಧ್ಯ (35) ಮೃತಪಟ್ಟಿದ್ದಾರೆ.

ADVERTISEMENT

ಹೊಸದುರ್ಗದಲ್ಲಿ ಗುಡುಗು ಸಹಿತ ಬಿರುಸಿನ ಮಳೆ ಸುರಿಯಿತು. ಚಿಕ್ಕಮಗಳೂರು ನಗರ, ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಮತ್ತು ಬಣಕಲ್‌ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಉಜಿರೆ ಸೇರಿದಂತೆ ಬೆಳ್ತಂಗಡಿ ತಾಲ್ಲೂಕಿನ ಕೆಲವೆಡೆ ಸಾಧಾರಣ ಮಳೆ ಸುರಿದಿದೆ.

ಆರು ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್': ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 2ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಹೆಚ್ಚು ಮಳೆಯಾಗಲಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಇದೇ 3ರವರೆಗೆ ಗುಡುಗು ಸಿಡಿಲು ಹೆಚ್ಚಾಗಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.