ADVERTISEMENT

ಕರಾವಳಿಯಲ್ಲಿ ಇಂದು ‘ಆರೆಂಜ್‌ ಅಲರ್ಟ್‌’

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2019, 4:02 IST
Last Updated 31 ಅಕ್ಟೋಬರ್ 2019, 4:02 IST
   

ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಅಕ್ಟೋಬರ್‌ 31ರಂದು ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಗುರುವಾರ ಕರಾವಳಿ ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಶುಕ್ರವಾರದವರೆಗೆ ಮೀನುಗಾರರು ಕಡಲಿಗೆ ಇಳಿಯ
ದಂತೆ ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ.ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುರುವಾರ ಗುಡುಗು, ಸಿಡಿಲಿನ ಪ್ರಮಾಣ ಹೆಚ್ಚಾಗಿ ಇರಲಿದೆ.

ಉತ್ತಮ ಮಳೆ: ಚಿಕ್ಕಮಗಳೂರು ಜಿಲ್ಲೆಯ ಕಡೂರು, ತರೀಕೆರೆಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗಿನಲ್ಲಿ ಬುಧವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ. ತಲಕಾವೇರಿ, ಭಾಗಮಂಡಲ, ಸಿದ್ದಾಪುರ, ಕುಟ್ಟ ಹಾಗೂ ಮಾಕುಟ್ಟ ಭಾಗದಲ್ಲಿ ರಭಸವಾಗಿ ಮಳೆ ಸುರಿಯಿತು. ಮಡಿಕೇರಿ ಸುತ್ತಮುತ್ತ ತುಂತುರು ಮಳೆ ಸುರಿದಿದೆ.

ADVERTISEMENT

ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಬಿಡುವು ನೀಡಿದ್ದ ಮಳೆ ಬುಧವಾರ ಮತ್ತೆ ಚುರುಕುಗೊಂಡಿದೆ.

ಶಿವಮೊಗ್ಗ ನಗರದಲ್ಲಿ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಾಗರ, ಹೊಸನಗರ, ತೀರ್ಥಹಳ್ಳಿ, ಭದ್ರಾವತಿಯ ಸುತ್ತಮುತ್ತ ಸಾಧಾರಣ ಮಳೆಯಾಗಿದ್ದು, ಶಿಕಾರಿಪುರದಲ್ಲಿ ತುಂತುರು ಮಳೆಯಾಗಿದೆ.

ಬುಧವಾರ ಹಾಸನದಲ್ಲಿ 4 ಹಾಗೂ ಮುಂಡಗೋಡದಲ್ಲಿ 2, ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.