ADVERTISEMENT

ಕರಾವಳಿಯಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 20:42 IST
Last Updated 1 ಆಗಸ್ಟ್ 2020, 20:42 IST
ಮಳೆ (ಸಂಗ್ರಹ ಚಿತ್ರ)
ಮಳೆ (ಸಂಗ್ರಹ ಚಿತ್ರ)   

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ.

ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.

ADVERTISEMENT

ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ.ಬೆಳಗಾವಿ ನಗರ, ಹಿರೇಬಾಗೇವಾಡಿ, ಗೋಕಾಕ, ರಾಯಬಾಗದಲ್ಲಿ ಸಾಧಾರಣ ಮಳೆಯಾಗಿದೆ.

ಧಾರವಾಡ ನಗರದ ಟೋಲ್‌ನಾಕಾ ಬಳಿ ರಸ್ತೆ ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಜಿಲ್ಲೆಯ ಕಲಘಟಗಿ, ಅಳ್ನಾವರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.