ADVERTISEMENT

ಕೊಡಗು: ಮೂರ್ನಾಡು – ನಾಪೋಕ್ಲು ಸಂಪರ್ಕ ಕಡಿತ‌

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 10:25 IST
Last Updated 21 ಸೆಪ್ಟೆಂಬರ್ 2020, 10:25 IST
ಕೊಡಗು ಜಿಲ್ಲೆಯ ಶನಿವಾರಸಂತೆ ಮಾರ್ಗದಲ್ಲಿ ಗಾಳಿಗೆ ಬೃಹತ್‌ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು 
ಕೊಡಗು ಜಿಲ್ಲೆಯ ಶನಿವಾರಸಂತೆ ಮಾರ್ಗದಲ್ಲಿ ಗಾಳಿಗೆ ಬೃಹತ್‌ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು    

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಬಿಡುವು ನೀಡಿದ್ದ ಮಳೆ ಮಧ್ಯಾಹ್ನದ ಬಳಿಕ ಬಿಡುವು ಕೊಟ್ಟು ಧಾರಾಕಾರವಾಗಿ ಸುರಿಯುತ್ತಿದೆ.

ತಲಕಾವೇರಿ, ಭಾಗಮಂಡಲ, ಸಂಪಾಜೆ, ಶಾಂತಳ್ಳಿ ಹಾಗೂ ನಾಪೋಕ್ಲು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ.

ಕಾವೇರಿ ನದಿ ಪ್ರವಾಹದಿಂದ ಮೂರ್ನಾಡು – ನಾಪೋಕ್ಲು ಹಾಗೂ ಅಯ್ಯಂಗೇರಿ– ಭಾಗಮಂಡಲ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್‌ ಆಗಿದೆ.

ADVERTISEMENT

ಶನಿವಾರಸಂತೆ ಮಾರ್ಗದಲ್ಲಿ ಗಾಳಿಗೆ ಬೃಹತ್‌ ಮರ ಬಿದ್ದು ಕೆಲಕಾಲ ವಾಹನ ಸಂಚಾರ ಬಂದ್‌ ಆಗಿತ್ತು. ಹಾರಂಗಿ ಜಲಾಶಯ ಹೊರಹರಿವು ಹೆಚ್ಚಿಸಲಾಗಿದೆ. ಜಿಲ್ಲೆಯ ನದಿಗಳು ಹಾಗೂ ಹಳ್ಳ, ಕೊಳ್ಳಗಳು ಮೈದುಂಬಿ ಹರಿಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.