ಬೆಂಗಳೂರು: ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದರೆ, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ.
ಶಿವಮೊಗ್ಗದ ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ನಿರಂತರ ಮಳೆ ಸುರಿದಿದೆ. ಕೆಲವೆಡೆ ಮನೆಗಳು ಕುಸಿದಿವೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಹೋಬಳಿ ಚಂಗಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌವಳ್ಳಿಯಲ್ಲಿ ಗಾಳಿ ಮಳೆಗೆ ತಡರಾತ್ರಿ ದಮಯಂತಿ ಎಂಬುವವರ ಮನೆಯ ಒಂದು ಭಾಗ ಸಂಪೂರ್ಣ ಕುಸಿದು ಬಿದ್ದಿದೆ. ಪಶ್ಚಿಮಘಟ್ಟದ
ಅಂಚಿನ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 2.8 ಸೆಂ.ಮೀ. ಮಳೆ ಸುರಿದಿದೆ. ಎರಡು ಮನೆಗಳಿಗೆ ಪೂರ್ಣ, ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಪ್ಪಿನಕುದ್ರು, ವಕ್ವಾಡಿ, ಕಾರ್ಕಳ ತಾಲ್ಲೂಕಿನ ನೀರೆ, ಹೆಬ್ರಿ ತಾಲ್ಲೂಕಿನ ಅಂಡಾರು ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಸುರಿದಿದ್ದು, ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದೆ.
100 ಅಡಿ ದಾಟಿದ ಕೆಆರ್‌ಎಸ್
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಮಂಗಳವಾರ 100.05 ಅಡಿಗೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.