ADVERTISEMENT

ಕರಾವಳಿ, ಮಲೆನಾಡು, ಕೊಡಗು, ಉತ್ತರ ಕರ್ನಾಟಕ ಭಾಗದಲ್ಲಿ ಬಿರುಸುಗೊಂಡ ಮಳೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 5:43 IST
Last Updated 7 ಆಗಸ್ಟ್ 2019, 5:43 IST
   

ಬೆಂಗಳೂರು: ಕರಾವಳಿ, ಮಲೆನಾಡು, ಕೊಡಗು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಇಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರು ತಾಲ್ಲೂಕು ಹೊರತುಪಡಿಸಿ, ಉಳಿದ ನಾಲ್ಕು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲ್ಲೂಕಿಕನಲ್ಲಿ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ, ಆಯಾ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.

ಹಾಸನದಲ್ಲಿ ಮುಂಗಾರು ಮಳೆ ಬಿರುಸುಗೊಂಡಿರುವ ಹಿನ್ನಲೆಯಲ್ಲಿಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ADVERTISEMENT

ಕೊಡಗಿನಲ್ಲೂ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಈ ಭಾಗದ ಮೂರು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯೊಂದಿಗೆ ಮಂಗಳವಾರ ಮತ್ತು ಬುಧವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.