ADVERTISEMENT

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ ಸಾಧ್ಯತೆ

ತಾಪಮಾನ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 5:16 IST
Last Updated 19 ಏಪ್ರಿಲ್ 2019, 5:16 IST
ಟ್ವಿಟರ್‌ ಚಿತ್ರ
ಟ್ವಿಟರ್‌ ಚಿತ್ರ   

ಬೆಂಗಳೂರು: ಟ್ರಫ್‌ (ಮೋಡಗಳ ಸಾಲು) ರಾಜ್ಯದ ಮೇಲೆಹಾದು ಹೋಗಿರುವ ಕಾರಣ ಇನ್ನೂ ಎರಡು ದಿನ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಆದರೆ, ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆ ಇಲ್ಲ. ಗರಿಷ್ಠ ಎರಡು ಗಂಟೆ ಮಳೆ ಬೀಳಬಹುದು ಎಂದು ರಾಜ್ಯ ವಿಕೋಪ ನಿರ್ವಹಣಾ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದರು.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆದಿದ್ದು, ಕಲಬುರ್ಗಿಯಲ್ಲಿ ಗುರುವಾರ ಗರಿಷ್ಠ 41 ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಮುಂದಿನ 48 ಗಂಟೆಯೂ ಒಣ ಹವೆ ಮುಂದುವರೆಯಲಿದೆ ಎಂದರು.

ADVERTISEMENT

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.