ADVERTISEMENT

ರಾಜ್ಯದ ಹಲವೆಡೆ ಮಳೆ ಮುಂದುವರಿಕೆ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 14:40 IST
Last Updated 13 ಏಪ್ರಿಲ್ 2024, 14:40 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಸಹ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಭಾನುವಾರ ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚನೆ ನೀಡಿದೆ.

ADVERTISEMENT

ಏಪ್ರಿಲ್‌ 15 ಹಾಗೂ 16ರಂದು ರಾಜ್ಯದಾದ್ಯಂತ ಒಣಹವೆ ಇರಲಿದೆ. ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ 22 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ 4 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ಬೀದರ್‌ನ ಹುಮ್ನಾಬಾದ್, ಗದಗದ ನರಗುಂದ 2, ವಿಜಯಪುರದ ಝಳಕಿ ಕ್ರಾಸ್‌ನಲ್ಲಿ ತಲಾ 2 ಸೆಂ.ಮೀ, ಯಾದಗಿರಿಯ ಕಕ್ಕೇರಿ, ಕೊಪ್ಪಳದ ಯಲಬುರ್ಗಾ, ಚಿಕ್ಕಮಗಳೂರಿನ ಜಯಪುರ, ಶೃಂಗೇರಿ, ಬಾಳೆಹೊನ್ನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.