ADVERTISEMENT

‌ಕೊಡಗಿನಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2019, 14:44 IST
Last Updated 3 ಸೆಪ್ಟೆಂಬರ್ 2019, 14:44 IST

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ.

ಬೆಳಿಗ್ಗೆಯಿಂದ ಮಧ್ಯಾಹ್ನ 2ರ ತನಕವೂ ಬಿರುಸಾಗಿದ್ದ ಮಳೆ, ಬಳಿಕ ಸ್ವಲ್ಪ ಬಿಡುವು ಕೊಟ್ಟಿತು.

ತಲಕಾವೇರಿ, ಸುಂಟಿಕೊಪ್ಪ, ನಾಪೋಕ್ಲು, ಅಪ್ಪಂಗಳ, ಚೇರಂಬಾಣೆ, ಗೋಣಿಕೊಪ್ಪಲು, ಶ್ರೀಮಂಗಲ, ಕುಟ್ಟ ಭಾಗದಲ್ಲಿ ಮಳೆಯಾಗಿದೆ.

ADVERTISEMENT

ಸೋಮವಾರ ದಿನವಿಡೀ ಸುರಿದ ಭಾರಿ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ವಿರಾಜಪೇಟೆ ನಗರ 2ನೇ ವಾರ್ಡ್‌ನಲ್ಲಿ ತಡೆಗೋಡೆ ಕುಸಿದಿದೆ. ಇದರಿಂದ 10 ಮನೆಗಳು ಅಪಾಯಕ್ಕೆ ಸಿಲುಕಿದ್ದು, ಸ್ಥಳೀಯ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಮೈಸೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.