ADVERTISEMENT

ಮುಂಗಾರು ಪ್ರವೇಶ: ಕೊಡಗಿನಲ್ಲಿ ತುಂತುರು ಮಳೆ

ಮೋಡ ಕವಿದ ವಾತಾವರಣ, ಶೀತ ಗಾಳಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 12:55 IST
Last Updated 10 ಜೂನ್ 2019, 12:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗಿಗೂ ಮುಂಗಾರು ಮಳೆ ಪ್ರವೇಶಿಸಿದ್ದು ಸೋಮವಾರ ಇಡೀ ದಿನ ತುಂತುರು ಮಳೆ ಸುರಿಯಿತು. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿತ್ತು. ಜತೆಗೆ, ಶೀತ ಗಾಳಿಯೂ ಬೀಸುತ್ತಿದೆ.

ಮಡಿಕೇರಿ ನಗರ, ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಕಕ್ಕಬ್ಬೆ, ಹೊದ್ದೂರು, ಮೂರ್ನಾಡು, ಪಾರಾಣೆ, ವಿರಾಜಪೇಟೆ, ಬಲಮುರಿ, ಮೇಕೇರಿ, ಕುಶಾಲನಗರ, ಸುಂಟಿಕೊಪ್ಪ, ಸಿದ್ದಾಪುರ ಮಧ್ಯಾಹ್ನದ ತನಕವೂ ಮುಂಗಾರು ಚುರುಕು ಪಡೆಯುವ ಲಕ್ಷಣ ಕಾಣಿಸಿತು. ಆದರೆ, ಮಧ್ಯಾಹ್ನದ ನಂತರ ಮಳೆ ಹನಿಯಾಗಿ ಸುರಿಯಲು ಆರಂಭಿಸಿತು.

ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಕೊಡಗು ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದೆ.

ADVERTISEMENT

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 2.59 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 93.22 ಮಿ.ಮೀ ಮಳೆಯಾಗಿತ್ತು.

ಜನವರಿಯಿಂದ ಇದುವರೆಗೂ 193.28 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 656.93 ಮಿ.ಮೀ ಮಳೆಯಾಗಿತ್ತು.

ಹೋಬಳಿವಾರು ವಿವರ: ಮಡಿಕೇರಿ ಕಸಬಾ 3, ನಾಪೋಕ್ಲು 2, ಭಾಗಮಂಡಲ 4.80, ಹುದಿಕೇರಿ 1.20, ಪೊನ್ನಂಪೇಟೆ 12.20, ಬಾಳೆಲೆ 13, ಸೋಮವಾರಪೇಟೆ ಕಸಬಾ 0.20, ಶಾಂತಳ್ಳಿ 1, ಕೊಡ್ಲಿಪೇಟೆ 4, ಕುಶಾಲನಗರ 0.40 ಮಿ.ಮೀ ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ: ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2,804.97 ಅಡಿಗಳು.

ಕಳೆದ ವರ್ಷ ಇದೇ ದಿನ 2,799.44 ಅಡಿ. ಇಂದಿನ ನೀರಿನ ಒಳಹರಿವು 64 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 3,968 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 60 ಕ್ಯುಸೆಕ್, ನಾಲೆಗೆ 50 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 30 ಕ್ಯುಸೆಕ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.