ADVERTISEMENT

ಸೆ.13 ರಿಂದ 14ರ ವರೆಗೆ ಭಾರಿ ಮಳೆ: ಏಳು ಜಿಲ್ಲೆಗಳಲ್ಲಿ 'ಆರೆಂಜ್ ಅಲರ್ಟ್'

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 17:21 IST
Last Updated 12 ಸೆಪ್ಟೆಂಬರ್ 2020, 17:21 IST
 ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಶನಿವಾರ ಜಿಟಿ ಜಿಟಿ ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಶನಿವಾರ ಜಿಟಿ ಜಿಟಿ ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.13 ಮತ್ತು 14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಸೆ.17ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರ್ಗಿ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ಮಳೆ-ಎಲ್ಲಿ,ಎಷ್ಟು?: ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಗರಿಷ್ಠ 22 ಸೆಂ.ಮೀ ಮಳೆಯಾಗಿದೆ. ಕುಂದಾಪುರ 17, ಭಟ್ಕಳ, 15, ಹೊಸನಗರ 13, ಉಡುಪಿ 9, ಮಂಗಳೂರು 8, ಭಾಗಮಂಡಲ 7, ಪುತ್ತೂರು, ಕಾರವಾರ 6, ಮೂಡುಬಿದರೆ, ಬೆಳ್ತಂಗಡಿ, ವಿರಾಜಪೇಟೆ 5, ಸುಳ್ಯ, ಮೂಡಿಗೆರೆ, ಚಳ್ಳಕೆರೆ 3, ಉಪ್ಪಿನಂಗಡಿ, ಕಮಲಾಪುರ, ಸಾಗರ 2, ಶ್ರೀರಂಗಪಟ್ಟಣ, ಸಕಲೇಶಪುರ, ತೀರ್ಥಹಳ್ಳಿ ಹಾಗೂ ಧಾರವಾಡದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.