ADVERTISEMENT

ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 26 ಮೇ 2020, 1:06 IST
Last Updated 26 ಮೇ 2020, 1:06 IST
ಚಾಮರಾಜನಗರದಲ್ಲಿ ಸುರಿದ ಮಳೆಯ ನೋಟ
ಚಾಮರಾಜನಗರದಲ್ಲಿ ಸುರಿದ ಮಳೆಯ ನೋಟ   

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇದೇ 26ರಿಂದ 29ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಈ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದ್ದು, ಇಲಾಖೆ ಮೂರೂ ದಿನಗಳವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ
40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT