ADVERTISEMENT

ಸೆಪ್ಟೆಂಬರ್ 7ರ ತನಕ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2023, 16:03 IST
Last Updated 1 ಸೆಪ್ಟೆಂಬರ್ 2023, 16:03 IST
   

ಬೆಂಗಳೂರು: ರಾಜ್ಯದ ಹಲವೆಡೆ ಸೆ.7ರ ತನಕ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.‌

ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಶನಿವಾರ ಹಾಗೂ ಭಾನುವಾರ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. 

ಬೆಂಗಳೂರು ನಗರದಲ್ಲೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಐಎಂಡಿ ಸೂಚನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.