ADVERTISEMENT

ತಗ್ಗಿದ ಮಳೆಯ ಅಬ್ಬರ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 11:39 IST
Last Updated 7 ಆಗಸ್ಟ್ 2020, 11:39 IST

ಬೆಳಗಾವಿ: ಜಿಲ್ಲೆಯಾದ್ಯಂತ ಶುಕ್ರವಾರ ಮಳೆಯ ರಭಸ ಕಡಿಮೆಯಾಗಿದೆ. ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲೂ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೂ, ಕೃಷ್ಣಾ ಹಾಗೂ ಉಪನದಿಗಳು ಮೈದುಂಬಿ ಹರಿಯುತ್ತಿವೆ.

ರಾಜಾಪುರ ಬ್ಯಾರೇಜ್‌ ಮೂಲಕ 1,21,000 ಕ್ಯುಸೆಕ್ ಹಾಗೂ ದೂಧ್‌ಗಂಗಾ ನದಿಯ 30,800 ಕ್ಯುಸೆಕ್‌ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,51,800 ಕ್ಯುಸೆಕ್‌ ನೀರು ಸೇರಿಕೊಳ್ಳುತ್ತಿದೆ. ನೀರು ನದಿ ಪಾತ್ರದೊಳಗೆ ಹರಿಯುತ್ತಿದ್ದು, ಪ್ರವಾಹದ ಸ್ಥಿತಿ ಇನ್ನೂ ತಲೆದೋರಿಲ್ಲ.

ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ವೇದಗಂಗಾ ನದಿಗಳಲ್ಲೂ ಒಳಹರಿವು ಏರಿಕೆಯಾಗಿದೆ. ಮಲಪ್ರಭಾ ನದಿಯ ನವಿಲುತೀರ್ಥ ಜಲಾಶಯ ಹಾಗೂ ಘಟಪ್ರಭಾ ನದಿಯ ಹಿಡಕಲ್‌ ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನೀರನ್ನು ಹೊರಗೆ ಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಾರ್ಕಂಡೇಯ ನದಿಯ ಶಿರೂರು ಜಲಾಶಯ ಬಹುತೇಕ ಭರ್ತಿಯಾಗಿದ್ದು, ಜಲಾಶಯದಿಂದ ನೀರನ್ನು ಹೊರಗೆ ಬಿಡಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.