ADVERTISEMENT

ಬೆಳಗಾವಿಯಲ್ಲಿ ಮಳೆ ಇಳಿಮುಖ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2019, 11:35 IST
Last Updated 23 ಅಕ್ಟೋಬರ್ 2019, 11:35 IST

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಬುಧವಾರ ಮಳೆಯ ರಭಸ ಕಡಿಮೆಯಾಗಿದೆ. ಬೆಳಗಾವಿ, ಹಿರೇಬಾಗೇವಾಡಿ, ರಾಯಬಾಗ, ಅಥಣಿ, ಸವದತ್ತಿಯಲ್ಲಿ ಬಿಟ್ಟುಬಿಟ್ಟು ಮಳೆಯಾಗಿದೆ.

ನೆರೆಯ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಇಳಿಮುಖವಾಗಿದೆ. ರಾಜಾಪುರ ಬ್ಯಾರೇಜ್‌ ಮೂಲಕ 74,900 ಕ್ಯುಸೆಕ್‌ ಹಾಗೂ ದೂಧ್‌ಗಂಗಾ– ವೇದಗಂಗಾ ಮೂಲಕ 17,424 ಕ್ಯುಸೆಕ್‌ ನೀರು ಸೇರಿ ಚಿಕ್ಕೋಡಿಯ ಕಲ್ಲೋಳ ಬಳಿ 92,324 ಕ್ಯುಸೆಕ್ ನೀರು ಕೃಷ್ಣಾಗೆ ಸೇರಿಕೊಳ್ಳುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಜಲಾವೃತಗೊಂಡಿರುವ 6 ಸೇತುವೆಗಳು ಯಥಾಸ್ಥಿತಿಯಲ್ಲಿವೆ. ರಾಯಬಾಗದ ಕುಡಚಿ ಸೇತುವೆ ಹಾಗೂ ಚಿಂಚಲಿ ಹಾಲಹಳ್ಳದ ಸೇತುವೆ ಮೇಲಿನ ನೀರು ಇಳಿದಿದೆ. ಜನರ ಸಂಚಾರ ಆರಂಭಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT