ADVERTISEMENT

ಸೆ.11ರಿಂದ ಎರಡು ದಿನ ಭಾರಿ ಮಳೆ: ಏಳು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಣೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 17:00 IST
Last Updated 10 ಸೆಪ್ಟೆಂಬರ್ 2020, 17:00 IST
ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಶನಿವಾರ ಸುರಿದ ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಶನಿವಾರ ಸುರಿದ ಮಳೆಯಲ್ಲೇ ಸಾಗುತ್ತಿರುವ ವಾಹನಗಳು -ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎರಡೂ ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೈರುತ್ಯ ಮುಂಗಾರು ಬಿರುಸುಗೊಂಡಿರುವುದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ವೇಗವಾದ ಗಾಳಿ ಹಾಗೂ ಗರಿಷ್ಠ 3.3 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯ ಬಾರದು ಎಂದು ಇಲಾಖೆ ಎಚ್ಚರಿಸಿದೆ.

ಅಲರ್ಟ್ ಎಲ್ಲೆಲ್ಲಿ ?: ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹಾಗೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಮಳೆ-ಎಲ್ಲಿ,ಎಷ್ಟು?: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ 17 ಸೆಂ.ಮೀ ಮಳೆಯಾಗಿದೆ. ಗುಬ್ಬಿ 10, ಆನೇಕಲ್, ಕಂಪ್ಲಿ, ತುಮಕೂರು, ಬೆಂಗಳೂರು 7, ಶಿರಾ, ಹೊಸಕೋಟೆ 6, ಹೊಸಪೇಟೆ 5, ವಿಜಯಪುರ, ಲಿಂಗಸಗೂರು, ರಾಯಚೂರು, ಮದ್ದೂರು, ಬಂಗಾರಪೇಟೆ, ವಿರಾಜಪೇಟೆ 4, ಬೈಲಹೊಂಗಲ, ಚಿಂಚೋಳಿ, ಕಲಬುರ್ಗಿ, ನೆಲಮಂಗಲ, ಕನಕಪುರ, ಹುಣಸೂರು, ಮಾಲೂರು 3, ಪುತ್ತೂರು, ಬೀದರ್, ಸಿಂಧನೂರು, ಗಂಗಾವತಿ, ರಾಮನಗರ, ಪಾಂಡವಪುರ 2, ತಿಪಟೂರು, ಕೊರಟಗೆರೆ, ಭದ್ರಾವತಿ, ಶಿಡ್ಲಘಟ್ಟ, ಕೋಲಾರ, ಗುಂಡ್ಲುಪೇಟೆ, ಕುಣಿಗಲ್, ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.