ADVERTISEMENT

ನವೆಂಬರ್ 8ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2019, 19:10 IST
Last Updated 4 ನವೆಂಬರ್ 2019, 19:10 IST

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇದೇ 8ರಿಂದಮತ್ತೆ ಮಳೆ ಆರಂಭಗೊಳ್ಳಲಿದೆ. ಈ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ನ.8ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ.

ಸೋಮವಾರ ಕಲಬುರ್ಗಿ ಜಿಲ್ಲೆಯ ಸುಲೆಪೇಟೆಯಲ್ಲಿ 2 ಸೆಂ.ಮೀ.ಮಳೆಯಾಗಿದೆ. ಪಣಂಬೂರು, ಪುತ್ತೂರು, ಸೈದಾಪುರ, ಆನವಟ್ಟಿಯಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.