ADVERTISEMENT

ಇಂದು–ನಾಳೆ ಗುಡುಗು ಸಹಿತ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 19:55 IST
Last Updated 2 ಮಾರ್ಚ್ 2020, 19:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಾರ್ಚ್‌ 4ರವರೆಗೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ಕೊಪ್ಪಳ ಹಾಗೂ ಧಾರವಾಡ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಲಿದೆ.

‘ರಾಜ್ಯದಲ್ಲಿ ದಿಢೀರ್ ಉಷ್ಣಾಂಶ ಏರಿಕೆಯಿಂದ ಹಲವೆಡೆ ಮಳೆ ಸುರಿದಿದೆ. ತಾಪಮಾನದ ಏರು‍ಪೇರಿನಿಂದ ಇಂತಹ ವ್ಯತ್ಯಾಸಗಳು ಸಾಮಾನ್ಯ. ಮಾ.5ರಿಂದ ಕರಾವಳಿ, ದಕ್ಷಿಣ ಉತ್ತರ ಒಳನಾಡಿನಲ್ಲಿ ಶುಷ್ಕ ವಾತಾವರಣ ಇರಲಿದೆ’ ಎಂದು ಹವಾಮಾನ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ADVERTISEMENT

ಸೋಮವಾರ ಕಲಬುರ್ಗಿಯಲ್ಲಿ35.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಹಾಗೂ ಬೀದರ್‌ನಲ್ಲಿ 17 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ 4 ಸೆಂ.ಮೀ.ಮಳೆಯಾಗಿದೆ. ಮೂಡುಬಿದಿರೆ, ಕಾರ್ಕಳ, ಪಣಂಬೂರು, ಕೃಷ್ಣರಾಜಪೇಟೆ 3, ಮಂಗಳೂರು, ಆಲಮಟ್ಟಿ 2, ಮುದ್ದೇಬಿಹಾಳ, ಕಮ್ಮರಡಿ, ನಂಜನಗೂಡು ಹಾಗೂ ಮೈಸೂರಿನಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.