ADVERTISEMENT

ಕರಾವಳಿ: ಐದು ದಿನ ಭಾರಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2020, 3:55 IST
Last Updated 7 ಜುಲೈ 2020, 3:55 IST
   

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಜು.7ರಿಂದ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಐದೂ ದಿನ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಆಗ್ನೇಯ ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ADVERTISEMENT

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.10ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ?: ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಸೋಮವಾರ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಟ್ಟಿಗೆಹಾರ 8, ಭಾಗಮಂಡಲ 6, ಕಳಸ 5, ಸುಬ್ರಹ್ಮಣ್ಯ, ಸಿದ್ದಾಪುರ, ಕದ್ರಾ, ಸಾಗರ, ಶೃಂಗೇರಿ, ಸಕಲೇಶಪುರ 4, ಧರ್ಮಸ್ಥಳ, ಉಪ್ಪಿನಂಗಡಿ, ಅಂಕೋಲಾ, ಹೊಸನಗರ, ಮೂಡಿಗೆರೆ, ಕೊಪ್ಪ 3, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಾರ್ಕಳ, ಬೆಳಗಾವಿ, ಮಡಿಕೇರಿ 2, ಮೂಡುಬಿದ್ರೆ, ಕುಂದಾಪುರ, ಕಾರವಾರ, ಭಟ್ಕಳ, ಗೋಕರ್ಣ, ಬೇಲೂರು, ಎಚ್.ಡಿ.ಕೋಟೆ, ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.